ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಮುಂದಿನ ವರ್ಷದ ಅಂದರೆ, 2025 -2026ನೇ ಸಾಲಿನ ಬಜೆಟ್ ಮಂಡಿಸಲು ಬೇಕಾರ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಕಳೆದ ನಾಲ್ಕು ವರ್ಷಗಳಿಂದ ಬಿಬಿಎಂಪಿ ಚುನಾವಣೆ ನಡೆದಿಲ್ಲ. ಹೀಗಾಗಿ, ಬಿಬಿಎಂಪಿಯ ಬಜೆಟ್ ಅನ್ನು ಬಿಬಿಎಂಪಿಯ ಅಧಿಕಾರಿಗಳೇ ಮಂಡಿಸುತ್ತಿದ್ದಾರೆ. ಈ ಬಾರಿಯೂ ಇದೇ ಮುಂದುವರಿದಿದೆ.
ಆದರೆ, ಈ ಬಾರಿ ಬಿಬಿಎಂಪಿಯು ಮಂಡನೆ ಮಾಡುತ್ತಿರುವ ಬಜೆಟ್‌ನಿಂದ ಆರ್ಥಿಕ ಹೊರೆ ಹೆಚ್ಚಾಗಲಿದೆಯೇ ಎನ್ನುವ ಆತಂಕ ಎದುರಾಗಿದೆ. ಬಿಬಿಎಂಪಿಯ ಆರ್ಥಿಕ ಹೊರೆಯು ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗುತ್ತಿದೆ. ಇದೀಗ ಬಿಬಿಎಂಪಿಯ ಅಧಿಕಾರಿಗಳು ಬರೋಬ್ಬರಿ 15 ಸಾವಿರ ಕೋಟಿ ರೂಪಾಯಿ ಮೊತ್ತದ ವಲವಾರು ಬಜೆಟ್ ಮಂಡನೆ ಮಾಡುವುದಕ್ಕೆ ಸಿದ್ಧತೆ ನಡೆಸಿದೆ.
ಬಿಬಿಎಂಪಿಯು 2024-25ನೇ ಸಾಲಿನಲ್ಲಿ 12,369 ಕೋಟಿ ರೂಪಾಯಿ ಬಜೆಟ್ ಮಂಡಿಸಿತ್ತು. ಇದೀಗ ಈ ಬಜೆಟ್ ಮೊತ್ತ (ಗಾತ್ರ)ವನ್ನು ಇದೀಗ 13,114 ಕೋಟಿ ರೂಪಾಯಿಗೆ ಹೆಚ್ಚಿಸಲಾಗಿದೆ. ಹೆಚ್ಚಾದ ಅನುಮೋದನೆ ಮೊತ್ತವನ್ನು ಸರ್ಕಾರ ನೀಡುವುದಾಗಿ ಭರವಸೆ ನೀಡಿದೆ ಎನ್ನಲಾಗಿದೆ. 745 ಕೋಟಿ ರೂಪಾಯಿ ಮೊತ್ತ ಹೆಚ್ಚಾಗಿದೆ. ಇದೇ ಮೊದಲ ಬಾರಿ ವಲಯವಾರು ಅಧಿಕಾರಿಗಳು ಬಜೆಟ್ ಮಂಡನೆ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಹೇಳಲಾಗಿದೆ.
ಬಿಬಿಎಂಪಿಯ ಬಜೆಟ್ ಗಾತ್ರವು ಪ್ರತಿ ವರ್ಷವೂ ಶೇಕಡಾ 5ರಿಂದ 8ರಷ್ಟು ಹೆಚ್ಚಳವಾಗುತ್ತದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 8 ವಲಯಗಳಿದ್ದು, ವಲಯವಾರು ಬಜೆಟ್ ಮಂಡನೆ ಮಾಡುವುದಕ್ಕೆ ಸಿದ್ಧತೆ ನಡೆಸಿಕೊಂಡಿದೆ. ಬಿಬಿಎಂಪಿಯಲ್ಲಿ ಕೇಂದ್ರೀಕೃತ ಬಜೆಟ್ ಮಂಡನೆ ಮಾಡಲಾಗುತ್ತಿದ್ದು, ಇದರಿಂದ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ ಎನ್ನುವ ಆರೋಪ ಇದೆ. ಹೀಗಾಗಿ, ಇದೀಗ ವಲಯವಾರು ಬಜೆಟ್ ಮಂಡನೆ ಪ್ರಸ್ತಾವನೆ ಮುನ್ನೆಲೆಗೆ ಬಂದಿದೆ.
ಬಿಬಿಎಂಪಿಯ ಚುನಾವಣೆಯು ಕಳೆದ 4 ವರ್ಷಗಳಿಂದ ನಡೆಯದೆ ಇರುವುದರಿಂದ ಬಿಬಿಎಂಪಿಯಲ್ಲಿ ಕೌನ್ಸಿಲರ್ ಹಾಗೂ ಬಿಬಿಎಂಪಿ ಮೇಯರ್ ಹಾಗೂ ಉಪ ಮೇಯರ್ ಆಯ್ಕೆ ಸೇರಿದಂತೆ ಯಾವುದೇ ಪ್ರಕ್ರಿಯೆಯೂ ನಡೆಯುತ್ತಿಲ್ಲ. ಇದರಿಂದಾಗಿ ಬಿಬಿಎಂಪಿಯಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಕೊರತೆ ಇದೆ.
ಪಾಲಿಕೆಯ ಚುನಾವಣೆಯನ್ನು ಮಂಡಿಸಲಾಗುತ್ತಿದ್ದರೂ, ಅದರಲ್ಲಿ ಯಾವ ವಿಶೇಷ ಯೋಜನೆಗಳನ್ನು ಪರಿಚಯಿಸಲಾಗುತ್ತಿದೆ ಎನ್ನುವುದು ಸೇರಿದಂತೆ ಹಲವು ವಿವರಗಳು ಲಭ್ಯವಾಗುತ್ತಿಲ್ಲ ಎನ್ನಲಾಗಿದೆ. ಸಾಮಾನ್ಯವಾಗಿ ಪಾಲಿಕೆಯಲ್ಲಿ ಕೌನ್ಸಿಲ್‌ರಗಳ ಅಧಿಕಾರ ನಡೆಯುವಾಗ ಪಾಲಿಕೆಯ ಬಜೆಟ್ ಹಾಗೂ ಪ್ರತಿ ತಿಂಗಳು ಮಾಸಿಕ ಸಭೆ ನಡೆಯುತ್ತಿತ್ತು. ಆಗ ಏನೆಲ್ಲ ಆಗುತ್ತಿದೆ ಎನ್ನುವ ಮಾಹಿತಿ ನಿಖರವಾಗಿ ಸಿಗುತ್ತಿತ್ತು. ಇದೀಗ ಪಾಲಿಕೆಯ ವೆಬ್‌ಸೈಟ್‌ನಲ್ಲಿ ಅಪ್ಡೇಟ್ ಆಗುತ್ತಿದ್ದರೂ, ಜನರಿಗೆ ಹುಡುಕುವುದು ಸವಾಲಾಗಿದೆ. ಆದರೆ, ಈ ಬಾರಿ ಬಜೆಟ್ ಯಾವ ರೀತಿ ಇರಲಿದೆ ಎಂದು ಕಾದು ನೋಡಬೇಕಾಗಿದೆ.