ಮುಂಬರಲಿರುವ ಕೇಂದ್ರ ಸರ್ಕಾರದ ಪೂರ್ವ-ಬಜೆಟ್ ಸಂಬಂಧಿಸಿ ರಾಜ್ಯ ಸರ್ಕಾರಗಳೊಂದಿಗಿನ ಸಮಾಲೋಚನಾ ಸಭೆಯು ರಾಜಸ್ಥಾನದ ಜೋಧ್ಪುರದಲ್ಲಿ ನಡೆದಿದೆ. ಈ ಸಭೆಯಲ್ಲಿ ಕರ್ನಾಟಕ ಸರ್ಕಾರವು ಪ್ರಮುಖ ಏಳು ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದೆ ಇಟ್ಟಿದೆ. ಕರ್ನಾಟಕ ರಾಜ್ಯ ಮತ್ತು ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ಈ ಬೇಡಿಕೆಗಳನ್ನು ಸಲ್ಲಿಸಿದ್ದಾರೆ.ಕಲ್ಯಾಣ ಕರ್ನಾಟಕದ ಹಿಂದುಳಿದ ಪ್ರದೇಶ ಮತ್ತು ಜಾಗತಿಕ ಪರಿಸರ ಸೂಕ್ಷ್ಮ ಪ್ರದೇಶವಾದ ಪಶ್ಚಿಮ ಘಟ್ಟಗಳ ಅಭಿವೃದ್ಧಿಗೆ ವಿಶೇಷ ಹೊಂದಾಣಿಕೆಯ ಅನುದಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಬೇಡಿಕೆ ಇಟ್ಟಿದೆ. ಅಲ್ಲದೆ, ಬರಪೀಡಿತ ಮಧ್ಯ ಕರ್ನಾಟಕಕ್ಕೆ ನೀರು ಒದಗಿಸಲು ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್ನಲ್ಲಿ ಈ ಹಿಂದೆಯೇ ಘೋಷಿಸಿದ್ದ 5,300 ಕೋಟಿ ರೂಪಾಯಿ ಬಿಡುಗಡೆಗೂಳಿಸುವಂತೆ ಕೇಳಿದೆ.
ಮೇಕೆದಾಟು ಮತ್ತು ಮಹಾದಾಯಿ ಯೋಜನೆಗಳಿಗೆ ಅನುಮೋದನೆ ನೀಡಬೇಕು. 15ನೇ ಹಣಕಾಸು ಆಯೋಗವು ಶಿಫಾರಸು ಮಾಡಿರುವ ವಿಶೇಷ ಅನುದಾನ 11,495 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆಯ ಬಿಡುಗಡೆಗೊಳಿಸುವಂತೆ ಬೇಡಿಕೆ ಇಟ್ಟಿದೆ.ಇನ್ನು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆಯರ ಗೌರವಧನವನ್ನು 5,000 ರೂಪಾಯಿಗೆ ಹೆಚ್ಚಿಸುವುದು. ಅಡುಗೆಯವರು ಮತ್ತು ಸಹಾಯಕರಿಗೆ ಗೌರವಧನವನ್ನು 2,000 ರೂಪಾಯಿಗೆ ಹೆಚ್ಚಿಸುವಂತೆಯೂ ರಾಜ್ಯ ಸರ್ಕಾರ ಕೇಳಿದೆ.
ಪ್ರಧಾನಮಂತ್ರಿ ಆವಾಜ್ ಯೋಜನೆ ನೆರವನ್ನು ನಗರ ಪ್ರದೇಶದ ಮನೆಗಳಿಗೆ 1.5 ಲಕ್ಷದಿಂದ 5 ಲಕ್ಷ ರೂಪಾಯಿಗಳಿಗೆ ಹಾಗೂ ಗ್ರಾಮೀಣ ಪ್ರದೇಶದ ಮನೆಗಳಿಗೆ 72,000 ರೂಪಾಯಿಯಿಂದ 3 ಲಕ್ಷ ರೂಪಾಯಿಗೆ ಹೆಚ್ಚಿಸಬೇಕು. ಜೊತೆಗೆ ವೃದ್ಧಾಪ್ಯ, ವಿಧವೆಯರು ಮತ್ತು ವಿಕಲಚೇತನರ ಪಿಂಚಣಿ ಹೆಚ್ಚಿಸಬೇಕೆಂದು ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದಿಟ್ಟಿದೆ.
ಯೋಜನೆ ಸಂಬಂಧ ಟೆಂಡರ್ ಕರೆಯಲಾಗಿದ್ದು, ಕೇಂದ್ರ ಅರಣ್ಯ ಇಲಾಖೆ ಅನುಮತಿ ದೊರೆತ ತಕ್ಷಣ ಕಾಮಗಾರಿ ಮಾಡುವುದಾಗಿ ಡಿ.ಕೆ ಶಿವಕುಮಾರ್ ಹೇಳಿದ್ದರು. ಮಹದಾಯಿ ಯೋಜನೆ ಅನುಮತಿ ಸಿಕ್ಕ ಕೂಡಲೇ ಕೆಲಸಗಳು ಆರಂಭವಾಗಲಿದ್ದು ಮುಂದಿನ ದಿನಗಳಲ್ಲಿ ಮಹದಾಯಿ ಯೋಜನೆಯೂ ಈ ಭಾಗಕ್ಕೆ ಬರಲಿದೆ ಎಂದು ಅವರು ಹೇಳಿದ್ದರು.
ಇದೇ ವಿಚಾರವಾಗಿ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ಸಿಎಂ ಸಿದ್ದರಾಮಯ್ಯ ಅವರು, ಮಹದಾಯಿ ಸಮಸ್ಯೆ ಬಗೆಹರಿಸುವುದಾಗಿ ರಕ್ತದಲ್ಲಿ ಬರೆದು ಕೊಡ್ತೀನಿ ಎಂದು ಬಸವರಾಜ ಬೊಮ್ಮಾಯಿ ಅವರು ಹೇಳಿದ್ದರು. ಆದರೆ ಅವರು ಮುಖ್ಯಮಂತ್ರಿಯಾಗಿ, ಕೇಂದ್ರದಲ್ಲೂ ಬಿಜೆಪಿ ಸರ್ಕಾರ ಇದ್ದರೂ ತಮ್ಮ ಮಾತನ್ನು ಉಳಿಸಿಕೊಳ್ಳಲಿಲ್ಲ ಎಂದು ವಾಗ್ದಾಳಿ ನಡೆಸಿದ್ದರು.
ಬೊಮ್ಮಾಯಿ ಅವರಿಗೆ ಅವಕಾಶ ಇದ್ದಾಗ ಏನೂ ಮಾಡಲಿಲ್ಲ. ಈಗಲೂ ಕೇಂದ್ರದಲ್ಲಿ ಬಿಜೆಪಿಯೇ ಅಧಿಕಾರದಲ್ಲಿದ್ದರೂ ಮಹದಾಯಿ ಸಮಸ್ಯೆ ಬಗೆಹರಿಸಲು ಏನೂ ಮಾಡುತ್ತಿಲ್ಲ. ಬಿಜೆಪಿಯವರು ಬರೀ ಬೊಗಳೆ ಬಿಡುತ್ತಾರೆ ಎಂದು ಕಿಡಿಕಾರಿದ್ದರು.
Author: VS NEWS DESK
pradeep blr