ಬೆಂಗಳೂರು, ಡಿ. ೨೬- ಹುಬ್ಬಳ್ಳಿಯ ಉಣಕಲ್‌ನ ಅಚ್ಚವ್ವ ಕಾಲೋನಿಯಲ್ಲಿ ನಡೆದಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟ ಇಬ್ಬರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಲಾ ೫ ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಈ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ೯ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಚಿಕಿತ್ಸೆ ಫಲಿಸದೆ ಇಬ್ಬರು ಇಂದು ಬೆಳಗಿನ ಜಾವ ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ ೫ ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟವರನ್ನು ಅಯ್ಯಪ್ಪ (೫೮) ಹಾಗೂ ಸಂಜಯ್ ಸವದತ್ತಿ (೨೦) ಎಂದು ಗುರುತಿಸಲಾಗಿದೆ. ಉಳಿದ ೭ ಮಂದಿ ಅಯ್ಯಪ್ಪ ಮಾಲಾಧಾರಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Author: VS NEWS DESK
pradeep blr