: ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಜಲಾಶಯ ಮೇಲ್ಭಾಗದಲ್ಲಿರುವ ಹಾರನಕಣಿವೆ ಶ್ರೀ ರಂಗನಾಥಸ್ವಾಮಿಯ ಅಂಬಿನೋತ್ಸವ ಹಿನ್ನೆಲೆ ಹೊಸದುರ್ಗ ಗಡಿ ಭಾಗವಾದ ರಸ್ತೆಯಲ್ಲಿ ಕಿ.ಮೀ. ದೂರದವರೆಗೂ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್, ಸಂಸದ ಗೋವಿಂದ ಕಾರಜೋಳ ಅವರಿಗೆ ಟ್ರಾಫಿಕ್ ಬಿಸಿ ತಟ್ಟಿದ ಘಟನೆ ನಡೆಯಿತು.
ಇತ್ತ ಟ್ರಾಫಿಕ್ ಸಮಸ್ಯೆಯಿಂದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಯಿತು. ತಮ್ಮ-ತಮ್ಮ ಊರುಗಳಿಗೆ ತಲುಪಲು ಬೈಕ್ ಸವಾರರು ಅಕ್ಕ-ಪಕ್ಕದ ಹೊಲ, ತೋಟಗಳ ಮೂಲಕ ಸಂಚರಿಸುವ ದೃಶ್ಯ ಕಂಡು ಬಂತು. ದೇವರ ದರ್ಶನ ಮುಗಿಸಿ ಹೊರ ಬಂದ ಸಂಸದ ಗೋವಿಂದ ಕಾರಜೋಳಗೆ ಗಂಟೆಗಟ್ಟಲೆ ಟ್ರಾಫಿಕ್‌ನಲ್ಲಿ ಸಿಲುಕಿ ಕಾರಿನಲ್ಲಿ ಕಾಲ ಕಳೆಯುವ ಸ್ಥಿತಿ ಒದಗಿ ಬಂತು. ಇನ್ನು ಟ್ರಾಫಿಕ್ ಜಾಮ್‌ನಿಂದ ಹೊರಬರಲು ಸಂಸದರು ಗಂಟೆ ಗಟ್ಟಲೆ ಕಾರಿನಲ್ಲಿ ಕುಳಿತ ಪ್ರಸಂಗ ನಡೆಯಿತು.
ಮತ್ತೊಂದೆಡೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಟ್ರಾಫಿಕ್ ಹಿನ್ನೆಲೆ ವಾಣಿ ವಿಲಾದ ಪುರ ಮಾರ್ಗವಾಗಿ ದೇವಸ್ಥಾನ ತಲುಪಿದರು. ಟ್ರಾಫಿಕ್ ಸ್ಥಳದಲ್ಲಿದ್ದ ಪತ್ರಕರ್ತರೊಬ್ಬರು 112 ನಂಬರ್‌ಗೆ ಕರೆ ಟ್ರಾಫಿಕ್ ಸಮಸ್ಯೆ ಬಗ್ಗೆ ಮಾಹಿತಿ ನೀಡಿದರು. ಅಂತಿಮವಾಗಿ ಸ್ಥಳಕ್ಕೆ ಡಿವೈಎಸ್ಪಿ ಶಿವಕುಮಾರ್ ಸಿಪಿಐ ಕಾಳಿ ಕೃಷ್ಣ, ಹೊಸದುರ್ಗ ಪಿಎಸ್ಐ ಪಾಟೀಲ್ ಭೇಟಿ ನೀಡಿ ಟ್ರಾಫಿಕ್ ಸಮಸ್ಯೆ ಬಗೆಹರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಬಿಸಿಲಿಗೆ ಬಸವಿಳಿದ ವಾಹನ ಸವಾರರು ಸಮಸ್ಯೆಯಿಂದ ನಿಟ್ಟುಸಿರು ಬಿಟ್ಟರು.
ಹಾವು, ಚೇಳು ಅರ್ಪಿಸುವ ಜಾತ್ರೆ: ಹಿರಿಯೂರು ತಾಲೂಕಿನಲ್ಲಿರುವ ರಂಗಯ್ಯನಿಗೆ ಹಾವು ಚೇಳುಗಳ ಹರಕೆಯ ಜಾತ್ರೆ ವಿಜೃಂಭಣೆಯಿಂದ ನೆರವೇರಿತು. ವಾಣಿ ವಿಲಾಸ ಸಾಗರ ಜಲಾಶಯದ ಹಿನ್ನೀರಿನ ದಡದಲ್ಲಿರುವ ಬುಡಕಟ್ಟು ಕಾಡುಗೊಲ್ಲರ ಆರಾಧ್ಯ ದೈವ ಹಾರನಕಣಿವೆ ಶ್ರೀ ರಂಗನಾಥಸ್ವಾಮಿಯ ಅಂಬಿನೋತ್ಸವ ಹಾಗೂ ಹಾವು, ಚೇಳುಗಳ ಅರ್ಪಿಸುವ ಹರಕೆಯ ಜಾತ್ರೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಭಾನುವಾರ (ಅಕ್ಟೋಬರ್ 13) ಸಂಭ್ರಮ ಸಡಗರದಿಂದ ನೇರವೇರಿತು.
ಹಿರಿಯೂರು ಹಾಗೂ ಹೊಸದುರ್ಗ ತಾಲೂಕಿನ ಗಡಿಭಾಗದಲ್ಲಿ ಹರಿಹರರು ನೆಲೆಸಿದ್ದ ಪ್ರಮುಖ ಕ್ಷೇತ್ರವೆಂದು ಕರೆಯುವ ಹಾರನಕಣಿವೆ ಅಪಾರ ಮಹಿಮೆ ಹಾಗೂ ಭಕ್ತರನ್ನು ಹೊಂದಿರುವ ಪುಣ್ಯ ಕ್ಷೇತ್ರವಾಗಿದೆ. ಶ್ರೀ ರಂಗನಾಥಸ್ವಾಮಿಯ ದಸರಾ ಪ್ರಯುಕ್ತ ವಿಶೇಷ ಜಾತ್ರೆ, ಅಂಬಿನೋತ್ಸವ ಹಾಗೂ ವಿಶೇಷ ಪೂಜೆಗಳು ನಡೆದವು.
ಹೊಸದುರ್ಗ ತಾಲೂಕಿನ ಅಂಚಿಬಾರಿಹಟ್ಟಿ ಗ್ರಾಮದಲ್ಲಿರುವ ಶ್ರೀ ರಂಗನಾಥಸ್ವಾಮಿಯ ಉತ್ಸವ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ವಾಣಿವಿಲಾಸ ಸಾಗರ ಜಲಾಶಯದಲ್ಲಿ ಸ್ವಾಮಿಗೆ ಗಂಗಾಪೂಜೆ ಹಾಗೂ ಕುದುರೆ ಪೂಜೆ ಕಾರ್ಯ ನೆರವೇರಿಸಲಾಯಿತು. ಬಳಿಕ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಕೂರಿಸಿ ಮೆರವಣಿಗೆಯೊಂದಿಗೆ ಗುಡಿ ಗೌಡ, ಪೂಜಾರಿ, ಗ್ರಾಮದ ಅಣ್ಣ-ತಮ್ಮಂದಿರು ಹಾಗೂ ಭಕ್ತರ ನೇತೃತ್ವದಲ್ಲಿ ಅದ್ದೂರಿಯಾಗಿ ಹಾರನಕಣಿವೆ ಕ್ಷೇತ್ರಕ್ಕೆ ಕರೆತಂದು ಶಿವ ಹಾಗೂ ವಿಷ್ಣುವಿಗೆ ಮೊದಲ ಪೂಜೆ ಸಲ್ಲಿಸಿದರು.
ನಂತರ ಜಂಬೂ ಮರದ ಮುಂದೆ ನೆಟ್ಟಿದ್ದ ಬಾಳೆ ಗಿಡಕ್ಕೆ ಪೂಜಾರಿಯು ಮೂರು ಬಾರಿ ಪ್ರದಕ್ಷಿಣೆ ಹಾಕಿ, ಬಿಲ್ಲು ಹಿಡಿದು ಬಾಣ ಹೊಡೆದು, ಬಾಳೆಗಿಡ ಕಡಿಯುವ ಮೂಲಕ ಅಂಬಿನೋತ್ಸವ ಕಾರ್ಯ ನೇರವೇರಿತು.
ವಿಷ ಜಂತುಗಳ ಹರಕೆ: ಮನೆ, ಹೊಲ ಗದ್ದೆಗಳಲ್ಲಿ, ರಾತ್ರಿ ವೇಳೆ ವಿಷ ಜಂತುಗಳು ತಮಗೆ ಕಾಣಿಸಿಕೊಂಡಾಗ ರಂಗನಾಥ ಸನ್ನಿಧಿಗೆ ಬಂದು ಜಾತ್ರೆಯಲ್ಲಿ ಹುಳಗಳನ್ನು ಅರ್ಪಿಸುತ್ತೇವೆ ಎಂದು ಹರಕೆ ಕಟ್ಟಿಕೊಳ್ಳುತ್ತಾರೆ. ಕಟ್ಟಿಕೊಂಡ ಹರಕೆ ತೀರಿಸಲು ತಂದಿದ್ದ ಜರಿ, ಹಾವು, ಚೇಳುಗಳನ್ನು ಭಕ್ತರು ಸರತಿ ಸಾಲಿನಲ್ಲಿ ನಿಂತು ಹುಂಡಿಯಲ್ಲಿ ಹಾಕಿ ಹರಕೆ ತೀರಿಸು ದೃಶ್ಯ ಗಮನ ಸೆಳೆಯಿತು.
ಜೊತೆಗೆ ಕೆಲವು ಭಕ್ತಾಧಿಗಳು ತಮ್ಮ ಮತ್ತೊಂದು ಹರಕೆಯಂತೆ ಬಾಳೆಹಣ್ಣು ಹಾಗೂ ಸಕ್ಕರೆ ತಂದು ದೇವಾಲಯದ ಸುತ್ತಮುತ್ತ ಇರುವ ಹಸಿರು ಗಿಡಗಳ ಹತ್ತಿರ ಬಾಳೆ ಎಲೆ ಹಾಕುತ್ತಾರೆ. ಬಳಿಕ ಅದರಲ್ಲಿ ಸುಲಿದ ಬಾಳೆ ಹಣ್ಣು ಹಾಕಿ, ಸಕ್ಕರೆ ಬೆರೆಸಿ ಪೂಜೆ ಸಲ್ಲಿಸಿದರು. ನಂತರ ದಾಸಯ್ಯರಿಂದ ಗೋವಿಂದ ಅನ್ನಿಸಿ ಸುತ್ತ ಮುತ್ತ ಇದ್ದ ಭಕ್ತರಿಗೆ ಪ್ರಸಾದ ವಿತರಣೆ ಮಾಡುವುದು ಮತ್ತೊಂದು ವಿಶೇಷವಾಗಿತ್ತು.
ಬುಡಕಟ್ಟು ಜನಾಂಗದ ಆರಾಧ್ಯ ದೈವ: ಬಯಲು ಸೀಮೆಯ ಬುಡಕಟ್ಟು ಕಾಡುಗೊಲ್ಲ ಸಮುದಾಯದ ಧಾರ್ಮಿಕ ಕೇಂದ್ರ ಹಾಗೂ ಆರಾಧ್ಯ ದೈವ ಹಾರನಕಣಿವೆ ರಂಗನಾಥ ಸ್ವಾಮಿಯ ಮಹಿಮೆ ಅಪಾರವಾಗಿದೆ. ಕರಡಿ ಬುಳ್ಳಪ್ಪ ವಂಶಸ್ಥರಾದ ಕರಡಿ ಗೊಲ್ಲರು ರಂಗನಾಥ ಸ್ವಾಮಿಯನ್ನು ಪೂಜಿಸಿಕೊಂಡು ಬರುತ್ತಾರೆ. ನಂಬಿ ಬಂದವರನ್ನು ರಂಗಯ್ಯ ಯಾರನ್ನೂ ಕೈಬಿಟ್ಟಿಲ್ಲ ಎನ್ನುವುದು ಸಮುದಾಯದ ನಂಬಿಕೆ.
ಈ ದೇವಾಲಯಕ್ಕೆ ತನ್ನದೇ ಆದ ಐತಿಹಾಸಿಕ ಹಿನ್ನೆಲೆ ಇದೆಯಂತೆ.
ಜೊತೆಗೆ ಕೆಲವು ಭಕ್ತಾಧಿಗಳು ತಮ್ಮ ಮತ್ತೊಂದು ಹರಕೆಯಂತೆ ಬಾಳೆಹಣ್ಣು ಹಾಗೂ ಸಕ್ಕರೆ ತಂದು ದೇವಾಲಯದ ಸುತ್ತಮುತ್ತ ಇರುವ ಹಸಿರು ಗಿಡಗಳ ಹತ್ತಿರ ಬಾಳೆ ಎಲೆ ಹಾಕುತ್ತಾರೆ. ಬಳಿಕ ಅದರಲ್ಲಿ ಸುಲಿದ ಬಾಳೆ ಹಣ್ಣು ಹಾಕಿ, ಸಕ್ಕರೆ ಬೆರೆಸಿ ಪೂಜೆ ಸಲ್ಲಿಸಿದರು. ನಂತರ ದಾಸಯ್ಯರಿಂದ ಗೋವಿಂದ ಅನ್ನಿಸಿ ಸುತ್ತ ಮುತ್ತ ಇದ್ದ ಭಕ್ತರಿಗೆ ಪ್ರಸಾದ ವಿತರಣೆ ಮಾಡುವುದು ಮತ್ತೊಂದು ವಿಶೇಷವಾಗಿತ್ತು.
ಬುಡಕಟ್ಟು ಜನಾಂಗದ ಆರಾಧ್ಯ ದೈವ: ಬಯಲು ಸೀಮೆಯ ಬುಡಕಟ್ಟು ಕಾಡುಗೊಲ್ಲ ಸಮುದಾಯದ ಧಾರ್ಮಿಕ ಕೇಂದ್ರ ಹಾಗೂ ಆರಾಧ್ಯ ದೈವ ಹಾರನಕಣಿವೆ ರಂಗನಾಥ ಸ್ವಾಮಿಯ ಮಹಿಮೆ ಅಪಾರವಾಗಿದೆ. ಕರಡಿ ಬುಳ್ಳಪ್ಪ ವಂಶಸ್ಥರಾದ ಕರಡಿ ಗೊಲ್ಲರು ರಂಗನಾಥ ಸ್ವಾಮಿಯನ್ನು ಪೂಜಿಸಿಕೊಂಡು ಬರುತ್ತಾರೆ. ನಂಬಿ ಬಂದವರನ್ನು ರಂಗಯ್ಯ ಯಾರನ್ನೂ ಕೈಬಿಟ್ಟಿಲ್ಲ ಎನ್ನುವುದು ಸಮುದಾಯದ ನಂಬಿಕೆ.
ಈ ದೇವಾಲಯಕ್ಕೆ ತನ್ನದೇ ಆದ ಐತಿಹಾಸಿಕ ಹಿನ್ನೆಲೆ ಇದೆಯಂತೆ. ಹಾವು, ಚೇಳು ಕಚ್ಚಿ ಆಸ್ಪತ್ರೆಗೆ ಹೋಗಿ ಗುಣಮುಖರಾಗದೇ ಸಾವು ಬದುಕಿನ ನಡುವೆ ಹೋರಾಟ ನಡೆಸಿ, ರಂಗಪ್ಪನ ಸನ್ನಿಧಿಗೆ ಬಂದು ಗುಣಮುಖ ವಾಗಿರುವುದು ಅದೇಷ್ಟೋ ಉದಾಹರಣೆಗಳಿರುವುದು ಸ್ವಾಮಿಯ ಪವಾಡವಂತೆ. ಆದ್ದರಿಂದ ರಂಗನಾಥ ಸ್ವಾಮಿಯನ್ನು ವಿಷ ಜಂತುಗಳ ಪರಿಹಾರಕ ಎಂತಲೂ ಕರೆಯುವುದುಂಟು.