Davangere Riot: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ, 48 ಮಂದಿಗೆ ರಿಲೀಫ್‌!

ರಾಜ್ಯದಲ್ಲಿ ಈ ಬಾರಿ ಗಣೇಶ ಚತುರ್ಥಿಯು ಕಲ್ಲು ತೂರಾಟದ ಪ್ರಕರಣಗಳಿಗೆ ಸಾಕ್ಷಿಯಾಗಿತ್ತು. ಹಬ್ಬದ ಸಂಭ್ರಮ ಬದಲು ಪೊಲೀಸ್‌ ಠಾಣೆ ಮೆಟ್ಟಿಲೇರುವ ಭಾಗ್ಯವೂ ಕೆಲವರಿಗೆ ಸಿಕ್ಕಿತ್ತು. ನಾಗಮಂಗಲ ಬಳಿಕ ದಾವಣಗೆರೆಯಲ್ಲೂ ಗಣೇಶನ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿತ್ತು.

ಸೆಪ್ಟೆಂಬರ್‌ 19ರಂದು ದಾವಣಗೆರೆಯಲ್ಲಿ ಸರ್ಕಲ್‌ವೊಂದರ ಬಳಿ ನಡೆದಿದ್ದ ಕಲ್ಲು ತೂರಾಟ ಸಂಬಂಧ ಹಿಂದೂ ಮುಸ್ಲಿಂ ಸಮುದಾಯಗಳ ಒಟ್ಟು 48 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಅಂದು ಅರಳಿ ಮರ ಸರ್ಕಲ್‌ನಲ್ಲಿ ಗಣೇಶ ವಿಸರ್ಜನೆಗೂ ಮುನ್ನ ಮೆರವಣಿಗೆ ನಡೆಯುತ್ತಿತ್ತು. ಇದ್ದಕ್ಕಿದ್ದಂತೆ ಅಜಾದ್ ನಗರದ ಮುಖ್ಯ ರಸ್ತೆಯಿಂದ ಮೊದಲು ಕಲ್ಲು ತೂರಾಟ ನಡೆದಿತ್ತು. ಇದರಿಂದ ಪೊಲೀಸ್‌ ಅಧಿಕಾರಿಗಳು ಕೂಡ ಗಂಭೀರ ಗಾಯಗೊಂಡಿದ್ದರು.

ಇದೇ ರೀತಿ ಮೂರು ಕಡೆಗಳಲ್ಲಿ ಕಲ್ಲು ತೂರಾಟ ನಡೆದಿತ್ತು. ಬಳಿಕ ಎಚ್ಚೆತ್ತುಕೊಂಡಿದ್ದ ಪೊಲೀಸರು ನಗರವಿಡೀ ಸಂಚರಿಸಿ, ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದರು. ಕಲ್ಲು ತೂರಾಟದ ಕೇಸ್‌ನಲ್ಲಿ ಆರಕ್ಕೂ ಹೆಚ್ಚು ಕೇಸ್‌ಗಳು ದಾಖಲಾಗಿದ್ದವು. ಹಿಂದೂ ಹಾಗೂ ಮುಸ್ಲಿಂ ಸಮುದಾಯಗಳ ನವಲತ್ತಕ್ಕೂ ಹೆಚ್ಚು ಮಂದಿಯನ್ನು ಅರೆಸ್ಟ್‌ ಮಾಡಲಾಗಿತ್ತು.

ಸೆಪ್ಟೆಂಬರ್ 19ರಂದು ಸಂಜೆ‌ ದಾವಣಗೆರೆ ನಗರದ ಮುದ್ದ ಬೋವಿ ಕಾಲೋನಿ ಹಾಗೂ ವೆಂಕಬೋವಿ ಕಾಲೋನಿಯ ಗಣೇಶನನ್ನು ನಗರದ ಅರಳಿ ಮರ ಸರ್ಕಲ್‌ನಲ್ಲಿ ಮೆರವಣಿಗೆ ಮಾಡುವಾಗ ಕಲ್ಲು ತೂರಾಟ ನಡೆದಿತ್ತು. ಈ ವೇಳೆ ಸರ್ಕಲ್ ಇನ್ಸ್‌ಪೆಕ್ಟರ್ ಗುರುಬಸವರಾಜ್ ಹಾಗೂ ಕ್ರೈಂ ವಿಭಾಗದ ಪೊಲೀಸ್ ಕಾನ್ಸ್‌ಸ್ಟೇಬಲ್ ರಘು ಎಂಬುವವರಿಗೆ ಗಾಯಗಳಾಗಿತ್ತು

ಆ ದಿನ ಆಗಿದ್ದೇನು?: ಗಣೇಶ ಮೆರವಣಿಗೆ ಸಾಗಿದ ಕಡೆಯೆಲ್ಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಅಟ್ಟಹಾಸ ಮೆರೆದಿದ್ದರು. ಈ ವೇಳೆ ಕೂಡಲೇ ಅಲ್ಲಿನ ಮುಸ್ಲಿಂ ಮುಖಂಡರು ಹಾಗೂ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದರು. ಮಂಡ್ಯದ ನಾಗಮಂಗಲದಲ್ಲಿ ನಡೆದ ಕಲ್ಲು ತೂರಾಟ ಹಾಗೂ ಈದ್ ಮಿಲಾದ್ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್ ಧ್ವಜ ಹಾರಿಸಿದ್ದನ್ನು ಖಂಡಿಸಿ ಹಿಂದೂ ಪ್ರತಿಭಟಿಸಿದ್ದರು.

ಈ ವೇಳೆ ಹಿಂದೂ ಜಾಗರಣ ವೇದಿಕೆಯ ಸತೀಶ್ ಪೂಜಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಯಾಗಿ ಮುಸ್ಲಿಂ ಮುಖಂಡರೊಬ್ಬರು ತಾಕತ್ ಇದ್ದರೆ ಬೇತೂರು ರಸ್ತೆಗೆ ಬಾ ಎಂದು ಸವಾಲು ಕೂಡ ಹಾಕಿದ್ದರು. ಇದೇ ಕಾರಣಕ್ಕೆ ಗಲಾಟೆ ನಡೆದಿತ್ತು.

ಗಣೇಶ ಮೆರವಣಿಗೆ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ನೆರೆದ ಮುಸ್ಲಿಮರು, ಇಸ್ಲಾಂ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು. ಇದೇ ವೇಳೆ ಕಲ್ಲು ತೂರಾಟ ನಡೆದಿತ್ತು. ಬಳಿಕ ಪೊಲೀಸರು ಸಿಸಿಟಿವಿ ದೃಶ್ಯ ಆಧರಿಸಿ, ಆರೋಪಿಗಳ ಪತ್ತೆ ಹಚ್ಚಿದ್ದರು. ಬಳಿಕ ದಾವಣಗೆರೆ ಶಾಂತವಾಗಿತ್ತು.

ಬಳಿಕ ನಲವತ್ತಕ್ಕೂ ಹೆಚ್ಚು ಮಂದಿ ಈ ಕೇಸ್‌ನಲ್ಲಿ ಬಂಧನಕ್ಕೆ ಒಳಗಾಗಿದ್ದರು. ನಂತರ ಆರೋಪಿಗಳು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಇನ್ನು ಗಲಭೆ ಸಂಬಂಧ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಹಿಂದೂ ಜಾಗರಣಾ ವೇದಿಕೆಯ ಸಂಚಾಲಕ ಸತೀಶ್ ಪೂಜಾರಿಗೂ ಜಾಮೀನು ಸಿಕ್ಕಿದ್ದು, ಇಂದು ಅದ್ಧೂರಿಯಾಗಿ ಸ್ವಾಗತಿಸಲಾಗಿದೆ ಎಂದು ತಿಳಿದುಬಂದಿದೆ.

ಬಿಸಿ ಬಿಸಿ ಸುದ್ದಿ

ಕ್ರಿಕೆಟ್ ಲೈವ್ ಸ್ಕೋರ್

ಚಿನ್ನ ಮತ್ತು ಬೆಳ್ಳಿ ಬೆಲೆಗಳು