ಬೆಂಗಳೂರು: ಏಕಗವಾಕ್ಷಿ ಯೋಜನೆಯಡಿ ಕೈಗಾರಿಕಾ ಯೋಜನೆಗಳಿಗೆ ಅನುಮೋದನೆ ಪ್ರಕ್ರಿಯೆಯನ್ನು ಸರಳಗೊಳಿಸಲು ಮೈಕ್ರೋಸಾಫ್ಟ್ ಕಂಪನಿ ನೆರವಿನಿಂದ ನೂತನ ಸಾಫ್ಟ್‌ವೇರ್ ಅಭಿವೃದ್ಧಿಪಡಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ.
ಗರಿಷ್ಠ 100 ದಿನಗಳೊಳಗೆ ಅಗತ್ಯವಿರುವ ಎಲ್ಲಾ ಅನುಮೋದನೆ ನೀಡುವ ಗುರಿ ಹೊಂದಲಾಗಿದ್ದು, ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ನೂತನ ಸಾಫ್ಟ್‌ವೇರ್ ಲೋಕಾರ್ಪಣೆ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ನೆರೆಹೊರೆಯ ಕೆಲವು ರಾಜ್ಯಗಳಲ್ಲಿ ಕೈಗಾರಿಕಾ ಹೂಡಿಕೆ ಯೋಜನೆಗಳಿಗೆ 60 – 70 ದಿನಗಳಲ್ಲಿ ಅನುಮೋದನೆಯನ್ನೂ ನೀಡಲಾಗುತ್ತಿದೆ. ಆದರೆ ನಮ್ಮ ರಾಜ್ಯದಲ್ಲಿ ಸರಾಸರಿ 300 ದಿನಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಇದನ್ನು 60-70 ದಿನಗಳಿಗೆ ಕಡಿಮೆಗೊಳಿಸಬೇಕೆಂಬುದು ತಮ್ಮ ಗುರಿಯಾಗಿದೆ. ಇಲ್ಲದೆ ಹೋದರೆ ನಾವು ಹೂಡಿಕೆಯನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.
Author: VS NEWS DESK
pradeep blr