CT Ravi: ಸಿ. ಟಿ. ರವಿ ಬಂಧನದಲ್ಲಿ ಸರ್ಕಾರದ ಹಸ್ತಕ್ಷೇಪ : ಡಿ. ಕೆ. ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು, ಡಿಸೆಂಬರ್ 21: ಈ ರಾಜ್ಯದಲ್ಲಿ ಏನೇ ನಡೆದರೂ ಡಿ.ಕೆ. ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣವೇ? ಎಲ್ಲದಕ್ಕೂ ನಾನೇ ಹೊಣೆಯೇ? ಸಿ.ಟಿ. ರವಿ ಅವರ ವಿಚಾರದಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಹೇಳಿದರು.

ಈ ಕುರಿತು ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿ, ಸಿ.ಟಿ. ರವಿ ಅವರ ಮೇಲೆ ಪೊಲೀಸ್ ಕ್ರಮ ತೆಗೆದುಕೊಳ್ಳುವ ವೇಳೆ ಡಿ.ಕೆ.ಶಿವಕುಮಾರ್ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪ್ರಭಾವ ಬೀರಿದ್ದಾರೆ ಎನ್ನುವ ಬಿಜೆಪಿಯವರ ಆರೋಪಕ್ಕೆ ಡಿ ಕೆ ಶಿವಕುಮಾರ್‌ ಸರ್ಕಾರದ ಹಸ್ತಕ್ಷೇಪ ಇಲ್ಲ ಎಂದು ತಿರುಗೇಟು ನೀಡಿದರು.ಕ್ರಮ ತೆಗೆದುಕೊಳ್ಳಲು ಪೊಲೀಸರಿದ್ದಾರೆ, ಕಾನೂನಿದೆ. ಅವರು ಯಾವ, ಯಾವ ಸೆಕ್ಷನ್ ಗಳನ್ನು ಹಾಕಿದ್ದಾರೆ ಎಂಬುದು ನಮಗೆ ತಿಳಿದಿಲ್ಲ. ಇದರಲ್ಲಿ ನಮ್ಮ ಯಾವ ಹಸ್ತಕ್ಷೇಪವೂ ಇಲ್ಲ. ಅವರುಂಟು, ಕಾನೂನು ಹಾಗೂ ಪೊಲೀಸರುಂಟು ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಹೇಳಿದರು.
ಜಾಮೀನು ಸಿಕ್ಕಿರುವುದು ಮೊದಲ ಗೆಲುವು ಎಂದು ಸಿ.ಟಿ. ರವಿ ಅವರು ಹೇಳಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಡಿ ಕೆ ಶಿವಕುಮಾರ್, “ತಾಯಿಗೆ, ಹೆಣ್ಣು ಕುಲಕ್ಕೆ, ನಮ್ಮ ಸಂಸ್ಕೃತಿಗೆ ಆಗಿರುವ ಅವಮಾನದ ಬಗ್ಗೆ ಮೊದಲು ಉತ್ತರ ನೀಡಲಿ‌ ಎಂದು ತಿರುಗೇಟು ನೀಡಿದರು.
VS NEWS DESK
Author: VS NEWS DESK

pradeep blr