New Year celebrations: ಹೊಸ ವರ್ಷಾಚರಣೆಗೆ ಬಂತು ಟೈಟ್‌ ರೂಲ್ಸ್‌, ಸಂಪೂರ್ಣ ಮಾಹಿತಿ ಇಲ್ಲಿದೆ

2024ಕ್ಕೆ ಗುಡ್‌ಬೈ ಹೇಳಿ 2025ರ ಹೊಸ ವರ್ಷವನ್ನು ಬರಮಾಡಿಕೊಳ್ಳಲು ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಎಂದಿನಂತೆ ಈ ಬಾರಿಯೂ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಭರ್ಜರಿ ತಯಾರಿಗಳು ನಡೆಯುತ್ತಿವೆ. ಈ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್‌ ಇಲಾಖೆ ಹಾಗೂ ಬಿಬಿಎಂಪಿ ಪ್ರತ್ಯೇಕ ನಿಯಮಗಳನ್ನು ಜಾರಿ ಮಾಡುತ್ತಿದ್ದು, ಈ ಬಾರಿಯ ಹೊಸ ವರ್ಷಾಚರಣೆಗೂ ಟೈಟ್‌ ರೂಲ್ಸ್‌ ಅನ್ನು ತಂದಿದೆ.ಹೊಸ ವರ್ಷಾಚರಣೆ ಸಂಬಂಧ ಈಗಾಗಲೇ ಬೆಂಗಳೂರು ಪೊಲೀಸರು ಹಾಗೂ ಬಿಬಿಎಂಪಿ ಅಧಿಕಾರಿಗಳು ಭಾರಿ ಅಲರ್ಟ್ ಆಗಿದ್ದು, ಸಿಲಿಕಾನ್‌ ಸಿಟಿಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಪೊಲೀಸ್ ಇಲಾಖೆ ಮತ್ತು ಬಿಬಿಎಂಪಿ ಅಧಿಕಾರಿಗಳು ಸಭೆ ನಡೆಸಿದ್ದಾರೆ. ಹೊಸ ವರ್ಷಕ್ಕೆ ಪ್ರತ್ಯೇಕ ಮಾರ್ಗಸೂಚಿಗಳನ್ನು ಜಾರಿಗೆ ತರಲು ಕೂಡ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಆದರೆ, ಈ ಬಾರಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಜೋರಾಗಿ ನಡೆಯುವ ಮಾಹಿತಿ ಹಿನ್ನೆಲೆ ಪೊಲೀಸರು ಕೂಡ ಹೈಅಲರ್ಟ್‌ ಆಗಿದ್ದಾರೆ. ಹಾಗಾಗಿ ಈ ಬಾರಿ ಈ ರಸ್ತೆಗಳಲ್ಲಿ ಸುಮಾರು 800ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಬಿಬಿಎಂಪಿಗೆ ಪೊಲೀಸರು ಸೂಚಿಸಿದ್ದಾರೆ ಎನ್ನಲಾಗಿದೆ. ಹಾಗಾಗಿ ಇನ್ನೇನು ಒಂದು ವಾರವಷ್ಟೇ ಸಮಯ ಇರುವುದರಿಂದ ಹೊಸ ವರ್ಷಕ್ಕೂ ಮುನ್ನವೇ ಪೊಲೀಸರು ಬಂದೋಬಸ್ತ್‌ನಲ್ಲಿ ತೊಡಗಲಿದ್ದಾರೆ.

ಹೊಸ ವರ್ಷಾಚರಣೆಗೆ ಏನೆಲ್ಲ ನಿಯಮ?

ಬೆಂಗಳೂರಿನಲ್ಲಿ ಡಿಸೆಂಬರ್‌ 31ರ ಮಧ್ಯರಾತ್ರಿ 1 ಗಂಟೆಯೊಳಗೆ ಹೊಸ ವರ್ಷಾಚರಣೆಯನ್ನು ಮುಗಿಸಬೇಕು. ನಗರದ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಇಂದಿರಾನಗರದಲ್ಲಿ ಮಾತ್ರವೇ ಸಾರ್ವಜನಿಕ ಆಚರಣೆಗೆ ಅನುಮತಿ ನೀಡಲಾಗಿದೆ. ಡಿಸೆಂಬರ್‌ 31ರ ರಾತ್ರಿ 10 ಗಂಟೆಯಿಂದಲೇ ನಗರದ ಪ್ರಮುಖ ಫ್ಲೈಓವರ್​ಗಳು ಬಂದ್ ಆಗಲಿವೆ. ಎಂ.ಜಿ.ರೋಡ್‌, ಬ್ರಿಗೇಡ್ ರೋಡ್‌ ಅಲ್ಲಿ 800ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಿದ್ದಾರೆ.

ಅಂದು ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ರಾತ್ರಿ 8 ಗಂಟೆಯ ನಂತರ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗುವುದು. ಅಲ್ಲಿಗೆ ಹೊಸ ವರ್ಷಾಚರಣೆಗೆ ಬರುವವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಕೂಡ ಇರಲಿದೆ. ಹೊಸ ವರ್ಷಾಚರಣೆಗೆ ಬರುವ ಮಹಿಳೆಯರ ಸುರಕ್ಷತೆಗಾಗಿ ಮಹಿಳಾ ಪೊಲೀಸರನ್ನು ನಿಯೋಜನೆ ಮಾಡಲಾಗುವುದು, ರಾತ್ರಿ 1 ಗಂಟೆ ಬಳಿಕ ಬಾರ್, ಪಬ್​ಗಳನ್ನು ಬಂದ್​ ಮಾಡುವಂತೆ ಸೂಚನೆ ನೀಡಲಾಗಿದೆ. ಅಲ್ಲದೆ ನಗರದ ವಿವಿಧ ಭಾಗಗಳಲ್ಲಿ ಹೊಸ ವರ್ಷಾಚರಣೆಗೆ ಅನುಮತಿ ಪಡೆಯುವುದು ಕಡ್ಡಾಯ. ಅಂದು ಯಾವುದೇ ಸ್ಪೀಕರ್ ಬಳಕೆ ಹಾಗೂ ಪಟಾಕಿ ಸಿಡಿಸುವಂತಿಲ್ಲ ಎಂದು ನಿಯಮಗಳನ್ನು ಜಾರಿ ಮಾಡಲಾಗಿದೆ.

VS NEWS DESK
Author: VS NEWS DESK

pradeep blr

ಬಿಸಿ ಬಿಸಿ ಸುದ್ದಿ

ಕ್ರಿಕೆಟ್ ಲೈವ್ ಸ್ಕೋರ್

ಚಿನ್ನ ಮತ್ತು ಬೆಳ್ಳಿ ಬೆಲೆಗಳು