ಎಚ್‌ಎಂಪಿ ವೈರಸ್:ಮುಂಜಾಗ್ರತ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು :ಜ.೬ –ಎಚ್ ಎಮ್ ಪಿವಿ ವೈರಸ್ ಬೆಂಗಳೂರಿನಲ್ಲಿ ೮ ತಿಂಗಳ ಮಗು ಹಾಗೂ ೩ ತಿಂಗಳ ಮಕ್ಕಳಲ್ಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆರೋಗ್ಯ ಇಲಾಖೆಗೆ ಎಲ್ಲಾ ರೀತಿಯ ಮುಂಜಾಗ್ರತ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದರು ವೈರಸ್ ಪತ್ತೆಯಾದ ಬೆನ್ನಲ್ಲೇ ಆರೋಗ್ಯ ಸಚಿವ ದಿನೇಶ್ ಗುಂಡೂರ ಸಭೆ ಕರೆದಿದ್ದಾರೆ. ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ ಇದು ಅಪಾಯಕಾರಿ ವೈರಸ್ ಅಲ್ಲ ಎಂದರು.

ಇದೊಂದು ಚೀನಾ ವೈರಸ್ ಆಗಿದ್ದು, ಕರ್ನಾಟಕಕ್ಕೆ ಬಂದಿದೆ ಎಂದು ಮಾಹಿತಿ ಸಿಕ್ಕಿದೆ.ಅದಕ್ಕೆ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆಗೆ ಸೂಚನೆ ನೀಡಿದ್ದೇನೆ. ಈಗಾಗಲೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಜೊತೆಗೆ ಮಾತನಾಡಿದ್ದು ಈಗಾಗಲೇ ಸಭೆ ಕರೆದು ಅಧಿಕಾರಿಗಳೊಂದಿಗೆ ಚರ್ಚಿಸುತ್ತಿದ್ದಾರೆ ಎಂದು ಹೇಳಿದರು.

ಬೆಂಗಳೂರಲ್ಲಿ ೮ ತಿಂಗಳ ಹಾಗೂ ೩ ತಿಂಗಳ ಮಗುವಿನಲ್ಲಿ ವೈರಸ್ ಕಾಣಿಸಿಕೊಂಡಿದೆ. ಇದು ಅಂತಹ ಅಪಾಯಕಾರಿ ವೈರಸ್ ಏನಲ್ಲ ಆದರೂ ಕೂಡ ಮಂಜಾಗ್ರತಾ ಕ್ರಮ ಕೈಗೊಳ್ಳಲು ಆರೋಗ್ಯ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

VS NEWS DESK
Author: VS NEWS DESK

pradeep blr

ಬಿಸಿ ಬಿಸಿ ಸುದ್ದಿ

ಕ್ರಿಕೆಟ್ ಲೈವ್ ಸ್ಕೋರ್

ಚಿನ್ನ ಮತ್ತು ಬೆಳ್ಳಿ ಬೆಲೆಗಳು